
ಶಿವಮೊಗ್ಗ : ಶಿವಮೊಗ್ಗದ ಊರುಗಡೂರು ವೃತ್ತದಲ್ಲಿ ವೈಯಕ್ತಿಕ ಕಾರಣಗಳಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾದವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ಎಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ವೈಯಕ್ತಿಕ ಕಾರಣಗಳಿಂದ ಹಲ್ಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ಪಿ ಕಾರ‌್ಯಪ್ಪ, ತುಂಗ ನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ಮತ್ತಿತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಸಾಲ್ಮೀಯ ಎಂಬ ಯುವತಿ ಫರ್ದೀನ್ ಪ್ರೀತಿಸಿ ಮದುವೆಯಾಗಿದ್ದು, ಈ ಮದುವೆ ಕುರಿತಂತೆ ತಕರಾರಿತ್ತು. ಅಣ್ಣ ಶಾಬಾಜ್ ಮತ್ತು ಸಂಬಧಿಕ ಶಬ್ಬೀರ್ ನ ಮೇಲೆ ತಂಗಿಯ ಪತಿಯ ಕಡೆಯವರು ಬಂದು ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮತ್ತೋರ್ವನು ಇದರಲ್ಲಿ ಗಾಯಗೊಂಡಿದ್ದಾನೆ ಎಂದು ಎಸ್ಪಿ ವಾಟ್ಸ್ಯಾಪ್ ಸಂದೇಶದ ಮೂಲಕ ತಿಳಿಸಿದ್ದಾರೆ.