
ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಯುದ್ಧ ವಿಮಾನವನ್ನು ಸ್ಥಾಪಿಸಲಾಗುತ್ತಿದ್ದು, ಸಾರ್ವಜನಿಕರು ಸುಗಮವಾಗಿ ಯುದ್ಧ ವಿಮಾನ ವೀಕ್ಷಿಸುವಂತಾಗಬೇಕು ಎಂಬುದು ಸೇರಿದಂತೆ ಹಲವು ಮಹತ್ವದ ಅಂಶಗಳ ಬಗ್ಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಿದರು.
Suddispot whatsapp group ಗೆ ಸೇರಲು ⇓
https://chat.whatsapp.com/Elg9Rs299CZCthsWMjcDDr?mode=ac_t
ಭಾರತೀಯ ಸೇನೆಯು ಬಳಸುತ್ತಿದ್ದ ಯುದ್ಧ ಟ್ಯಾಂಕರ್ ಅನ್ನು ಫ್ರೀಡಂ ಪಾರ್ಕ್‌ನಲ್ಲಿಯೇ ಸ್ಥಾಪಿಸಲಾಗಿದೆ. ಇದರ ಸನಿಹದಲ್ಲೇ ಯುದ್ಧ ವಿಮಾನ ಸ್ಥಾಪಿಸುವ ಕುರಿತು ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು.

ಇದನ್ನೂ ಓದಿ ⇒ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ