SSLC, PUC, ಯಾವುದೇ ಪದವಿ ಪಡೆದ ಅಭ್ಯರ್ಥಿಗಳಿಗೆ, ಉದ್ಯೋಗ ನೇರ ಸಂದರ್ಶನ, ಎಲ್ಲಿ, ಯಾವಾಗ?

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 07 ರಂದು ಬೆಳಿಗ್ಗೆ 10.00 ಗಂಟೆಗೆ ಖಾಸಗಿ ರಂಗದ ಪ್ರಮುಖ ಬ್ಯಾಂಕ್ ಆದ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಐತಿಹಾಸಿಕ ಗುಡ್ಡೇಕಲ್ ಹರೋಹರ ಜಾತ್ರೆಗೆ ಭರದ ಸಿದ್ಧತೆ 

ಶೈಕ್ಷಣಿಕ ಅರ್ಹತೆ : ಎಸ್ ಎಸ್ ಎಲ್ ಸಿ, ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ‌ ಸಂದರ್ಶನ ನಡೆಯಲಿದೆ.

ನೇರ ಸಂದರ್ಶನದ ಕುರಿತು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ನಿರುಪಯುಕ್ತ ವಾಹನಗಳ ತೆರವು

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...