
ಶಿವಮೊಗ್ಗ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೂರನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಯುವತಿಯರಿಗೆ ಹಾಗೂ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಇದನ್ನೂ ಓದಿ » ನೇರ ಸಂದರ್ಶನ: ಬ್ಯಾಂಕ್ ಉದ್ಯೋಗದಲ್ಲಿ ಆಸಕ್ತಿ ಇದ್ದರೆ, ಈ ಸುದ್ದಿ ನಿಮಗಾಗಿ!
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಜು.09 ರಂದು ಗುರುವಾರ ಬೆಳಗ್ಗೆ 10.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 09.07.2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ : 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಬಡಾವಣೆಗಳ ಮೂಲಸೌಕರ್ಯಗಳ ಕೊರತೆಯನ್ನು ನಿವಾರಿಸುವುದು ನಮ್ಮ ಅಜೆಂಡಾ: ಚೆನ್ನಿ