ಪಿಯುಸಿ, ಪದವೀಧರರಿಗೆ ಸುವರ್ಣಾವಕಾಶ, ಉಚಿತ ಪ್ರವೇಶ, ನೇರ ನೇಮಕಾತಿ: ಎಲ್ಲಿ, ಯಾವಾಗ?

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 05 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ನೆಕ್ಸ್ ಚರ್ ಮತ್ತು ಮುತ್ತೂಟ್ ಮನಿ ಪ್ರೈ.ಲಿ., ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ನ.05 ರಂದು ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು, ಪಿ.ಯು.ಸಿ. ಹಾಗೂ ಯಾವುದೇ ಪದವಿ ಪಡೆದ 18 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ : 9380663606 ಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...