ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ಪಹಣಿ ಪತ್ರ : ತಹಶೀಲ್ದಾರ್ ಸೂಚನೆ

ಶಿವಮೊಗ್ಗ : ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.

ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ.

ಸಾರ್ವಜನಿಕರು ಈ ಬಗ್ಗೆ ಮದ್ಯವರ್ತಿಗಳಿಗೆ ಅವಕಾಶ ಕೊಡದೇ ನೇರವಾಗಿ ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳನ್ನು ಹಾಗೂ ರಾಜಸ್ವ ನಿರೀಕ್ಷಕರನ್ನು ಭೇಟಿ ಮಾಡಿ ಉಚಿತವಾಗಿ ನಿಮ್ಮ ಜಮೀನಿನ ಖಾತೆಯನ್ನು ಬದಲಾಯಿಸಿಕೊಳ್ಳಲು ತಿಳಿಸಿದೆ. ಇ-ಪೌತಿ ಆಂದೋಲನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಹಾಗೂ ಇ-ಪೌತಿ ಆಂದೋಲನವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ರಾಜೀವ್ ವಿ ಎಸ್ ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...