ಊರುಗಡೂರಿನಲ್ಲಿ ಗಣೇಶೋತ್ಸವದ ಸಂಭ್ರಮ: ಭಕ್ತಿಭಾವದಿಂದ ಗಣಪತಿ ಪ್ರತಿಷ್ಠಾಪನೆ

ಶಿವಮೊಗ್ಗ : ಊರುಗಡೂರಿನಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ನೆನ್ನೆ ಶ್ರೀ ಗಣಪತಿ ಮೂರ್ತಿಯನ್ನು ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾಯಿತು. ವಿಶೇಷ ಪುಷ್ಪಾಲಂಕಾರ ಹಾಗೂ ದೀಪಾಲಂಕಾರದಿಂದ ಕಂಗೊಳಿಸಿದ ಗಣಪತಿ ಮೂರ್ತಿ ಭಕ್ತರ ಹಾಗೂ ಸಾರ್ವಜನಿಕರ ಗಮನ ಸೆಳೆಯಿತು.

ಪ್ರತಿಷ್ಠಾಪನೆಯ ಬಳಿಕ ಗಣಪತಿ ಸನ್ನಿಧಿಯಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳು ನೆರವೇರಿದವು. ವಿವಿಧ ಬಗೆಯ ಹೂವುಗಳಿಂದ ಮಾಡಲಾದ ಪುಷ್ಪಾಲಂಕಾರ ಹಾಗೂ ದೀಪಗಳ ಅಲಂಕಾರವು ಸ್ಥಳದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿತು.

ಗಣಪತಿ ದರ್ಶನಕ್ಕೆ ಭಕ್ತರು ಹಾಗೂ ಸಾರ್ವಜನಿಕರು ಆಗಮಿಸಿದ್ದು, ಮಕ್ಕಳ ಪಾಲ್ಗೊಳ್ಳುವಿಕೆಯೂ ವಿಶೇಷವಾಗಿತ್ತು. ಕುಟುಂಬ ಸಮೇತರಾಗಿ ಆಗಮಿಸಿದ ಭಕ್ತರು ವಿಘ್ನ ವಿನಾಯಕನ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಗಣೇಶೋತ್ಸವದ ಹಿನ್ನೆಲೆಯಲ್ಲಿ ಊರುಗಡೂರು ಕೇಸರಿಮಯವಾಗಿ ಕಂಗೊಳಿಸುತ್ತಿದ್ದು, ಗ್ರಾಮದಲ್ಲಿ ಹಬ್ಬದ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದೊಂದಿಗೆ ಗಣೇಶೋತ್ಸವ ಆಚರಣೆ ನಡೆಯುತ್ತಿದೆ.

ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News: ಸೆ.18 ರಂದು ನೇರ ಸಂದರ್ಶನ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...