
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಸೆ.18 ರಂದು ಬೆಳಿಗ್ಗೆ 10.00 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಅಪೋಲೋ ಫಾರ್ಮಸಿ ಪ್ರೈ.ಲಿ. ಹಾಗೂ ಮುತ್ತೂಟ್ ಮೈಕ್ರೋಫಿನ್ ಪ್ರೈ.ಲಿ. ಖಾಸಗಿ ಕಂಪನಿಗಳು ಸಂದರ್ಶನದಲ್ಲಿ ಭಾಗವಹಿಸಲಿದ್ದು, ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
ಅರ್ಹತೆ : ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಪ್ರವೇಶ ಉಚಿತವಾಗಿದ್ದು, ಅಭ್ಯರ್ಥಿಗಳು ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರಾಗಬೇಕು.
ಸ್ಥಳ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ಹೆಚ್ಚಿನ ಮಾಹಿತಿಗಾಗಿ 9380663606 / 9108235132 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ » ‘ವಂದೇ ಮಾತರಂ’ ವಿವಾದ, ನ್ಯಾಯಾಲಯದ ಮೆಟ್ಟಿಲೇರಲು ನಿರ್ಧಾರ, ಜನಾಂದೋಲನಕ್ಕೂ ಸಿದ್ಧ: ಎಸ್.ಎನ್. ಚನ್ನಬಸಪ್ಪ