
ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಈ ಕೆಳಕಂಡ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಶಿವಮೊಗ್ಗ ನಗರ ಗೋಪಿ ಸರ್ಕಲ್ನಿಂದ ಜೆಪಿಎನ್ ರಸ್ತೆ, ಜ್ಯುವೆಲ್ ರಾಕ್ ಹೊಟೇಲ್ ರಸ್ತೆ ಮಾರ್ಗವಾಗಿ ಕುವೆಂಪು ರಸ್ತೆ ಮತ್ತು ಜೈಲ್ ರಸ್ತೆ ಮೂಲಕ ಲಕ್ಷ್ಮಿ ಟಾಕೀಸ್ ವರೆಗೆ ಬೆಳಿಗ್ಗೆ 7.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ » ಶಿಕಾರಿಪುರದ ವಿವಿಧ ಭಾಗಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ, ಇಲ್ಲಿದೆ ಲಿಸ್ಟ್