ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ 3 ತಾಲ್ಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ ಆಯಾ ತಹಾಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ » ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

ಯಾವ ತಾಲ್ಲೂಕಿನಲ್ಲಿ ರಜೆ ಘೋಷಣೆ ?

  • ತೀರ್ಥಹಳ್ಳಿ : ಅಂಗನವಾಡಿ, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾ‌ರ್ ರಂಜಿತ್‌ ಆದೇಶ ಹೊರಡಿಸಿದ್ದಾರೆ.
  • ಹೊಸನಗರ : ಅಂಗನವಾಡಿ, ಶಾಲೆಗಳು ಮತ್ತು ಪಿ.ಯು ಕಾಲೇಜುಗಳಿಗೆ ತಹಶೀಲ್ದಾರ್ ಭರತ್ ರಾಜ್ ರಜೆ ಘೋಷಿಸಿದ್ದಾರೆ.
  • ಸಾಗರ : ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾ‌ರ್ ಡಾ. ಪ್ರತಿಭಾ ಆದೇಶಿಸಿದ್ದಾರೆ.

ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ ಕವಿದ ವಾತಾವರಣದ ನಡುವೆ ಆಗಾಗ್ಗೆ ಜಿಟಿಜಿಟಿ ಮಳೆ ಬಂದು ಹೋಗುತ್ತಿದೆ. ತುಂಗಾ ಮಂಟಪ ಮುಳುಗಲು ಇನ್ನೂ ಕಾಲು ಭಾಗ ಮಾತ್ರ ಬಾಕಿ ಇದೆ.

ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಚಿಕ್ಕ ಮಕ್ಕಳ ಹಿತದೃಷ್ಟಿಯಿಂದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿ ಮತ್ತು ಕಾಲೇಜುಗಳಿಗೆ ಆಯಾ ತಹಶೀಲ್ದಾರರುಗಳಿಂದ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ » ಅರ್ಹ ಮತದಾರರು ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ: ಪ್ರಭುಲಿಂಗ ಕವಳಿಕಟ್ಟಿ 

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...