
ಶಿವಮೊಗ್ಗ : ಭಾರೀ ಮಳೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಇಂದು (ಆಗಸ್ಟ್ 29) ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ 1000 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾ ಅಳವಡಿಕೆ, ಖಾಕಿ ಕಡಕ್ ಕಣ್ಗಾವಲು
ಶಿವಮೊಗ್ಗ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 29 ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆ ದಿನಗಳಂದು ಸರಿ ಹೊಂದಿಸಿಕೊಳ್ಳುವಂತೆ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ ಶುಕ್ರವಾರ ಬೆಳಿಗ್ಗೆ ಅವರು ವ್ಯಾಟ್ಸಾಪ್ ಸಂದೇಶದ ಮೂಲಕ ಪ್ರಕಟಣೆ ಹೊರಡಿಸಿದ್ದಾರೆ.