
ಶಿವಮೊಗ್ಗ : ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದ್ದು, ಮುಂಗಾರು ಮಳೆ ಚುರುಕುಗೊಂಡಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಇಂದು ಜುಲೈ 05, 2025 ರಂದು ರಜೆ ಘೋಷಿಸಲಾಗಿದೆ.
![]()
ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲ್ಲೂಕುಗಳಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಕಾರಣ, ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಿಸಿದೆ. ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ಅವಧಿಯಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಹಶೀಲ್ದಾರರು ಆದೇಶದಲ್ಲಿ ಸೂಚಿಸಿದ್ದಾರೆ.