
ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು.
ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ ಜೊತೆ ರಸ್ತೆ ಕಾಮಗಾರಿ ಬಗ್ಗೆ ಹಲವು ಬಾರಿ ಚರ್ಚೆ ಮಾಡಿದ ನಂತರ ವಿಶೇಷ ಪ್ರಯತ್ನದ ಮೇರೆಗೆ ಇದೀಗ ಎಲ್ಲಾ ಹಂತದಲ್ಲೂ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ನೂತನ ರಸ್ತೆಯ ಕಾಮಗಾರಿಯು ಪ್ರಾರಂಭವಾಗಿದೆ ಎಂದರು.

ಒಟ್ಟು ರೂ.3 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಈ ರಸ್ತೆ ಕಾಮಗಾರಿಯಲ್ಲಿ ರೂ.2 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ, ರೂ.1 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ರಸ್ತೆಯ ಕಾಮಗಾರಿ ಪೂರ್ಣಗೊಂಡ ನಂತರ ನಗರದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಹಾಗೂ ಸುರಕ್ಷಿತ ಮತ್ತು ಸುಗಮ ಪ್ರಯಾಣಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.
| ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ನಗರ ಶಾಸಕರು
ಹೇಗಿರಲಿದೆ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆ ಕಾಮಗಾರಿ ತಯಾರಿ :
ಈ ಕಾಮಗಾರಿಯನ್ನು ಮಾಡಲು ಸತೀಶ್ ಜಾರಕಿಹೊಳಿ ಯವರನ್ನು ಭೇಟಿ ಮಾಡಿದಾಗ ಇದನ್ನು ಗಮನಿಸಿ ನಾನು ಮಾಡಿಕೊಡುತ್ತೇನೆ ಎಂದು ಹೇಳಿದ್ದರು. ಅವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.