ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ರೂ. ಮೌಲ್ಯದ ಚಿನ್ನಭರಣ ವಶ

ಶಿವಮೊಗ್ಗ : ಮನೆಯೊಂದರ ಬೀರುವನ್ನು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ದೋಚಿದ್ದ ಆರೋಪಿಯನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಸೂಚಿಸಿ ಡಿಸಿ ಆದೇಶ

ಶಿಕಾರಿಪುರ ಟೌನ್ ಅರಸು ನಗರದ 2ನೇ ಕ್ರಾಸ್ ನಿವಾಸಿಯಾದ ಗೌರಮ್ಮ ಎಂಬುವವರು ಜೂನ್ 4 ರಂದು ಬೆಳಿಗ್ಗೆ 8:30 ರಿಂದ ಸಂಜೆ 5:45 ರ ಅವಧಿಯಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ಮನೆಯಿಂದ ಹೊರಗೋಗಿದ್ದರು. ಈ ಸಮಯವನ್ನು ಬಳಸಿಕೊಂಡ ಕಳ್ಳರು, ಅವರ ಮನೆಯ ಬೀರುನಲ್ಲಿದ್ದ ಲಕ್ಷಾಂತರ ಮೌಲ್ಯದ ಸೊತ್ತನ್ನು ಲೂಟಿ ಮಾಡಿದ್ದರು. ಈ ಬಗ್ಗೆ ಗೌರಮ್ಮ ಅವರು ಜೂನ್ 5 ರಂದು ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದರು.

ಕಳ್ಳರ ಪತ್ತೆಗಾಗಿ ತಕ್ಷಣವೇ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ತನಿಖೆ ಚುರುಕುಗೊಳಿಸಿದ ವಿಶೇಷ ತಂಡವು ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ ಮಾಸೂರು ರಸ್ತೆ ನಿವಾಸಿಯಾದ 47 ವರ್ಷದ ಅಮಿತ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯಿಂದ ಕಳವು ಮಾಡಲಾಗಿದ್ದ 3,14,400 ರೂಪಾಯಿ ಮೌಲ್ಯದ 28 ಗ್ರಾಂ ತೂಕದ ಚಿನ್ನದ ಆಭರಣಗಳು, 26,800 ರೂಪಾಯಿ ಮೌಲ್ಯದ 134 ಗ್ರಾಂ ತೂಕದ ಬೆಳ್ಳಿಯ ವಸ್ತುಗಳು ಹಾಗೂ 2 ಲಕ್ಷ ರೂಪಾಯಿ ಹಾರ್ಡ್ ಕ್ಯಾಶ್ ಸೇರಿದಂತೆ ಒಟ್ಟು ಮೊತ್ತವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ » ಊರಗಡೂರು ಗ್ರಾಮದ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ಎಸ್.ಎನ್.ಚನ್ನಬಸಪ್ಪ ಇಂದು ಗುದ್ದಲಿ ಪೂಜೆ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...