
ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೊಸ ದಾಖಲೆ ನಿರ್ಮಿಸಿದೆ.
ಪ್ರಥಮ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 8 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಭರ್ಜರಿ ಜಯ ಗಳಿಸಿದೆ.
ಈ ಪಂದ್ಯವು ಐಪಿಎಲ್ 2025 ರ ಅಂತಿಮ ಹಂತದ ಪ್ರಮುಖ ಪಂದ್ಯವಾಗಿದೆ. ಆರಂಭದಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದವು. ವಿಶೇಷವೆಂದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ಈ ಎರಡೂ ತಂಡಗಳೂ ಈವರೆಗೆ ಐಪಿಎಲ್ ಟ್ರೋಫಿ ಗೆದ್ದಿಲ್ಲ. ಈ ಪಂದ್ಯವನ್ನು ಗೆದ್ದ ತಂಡ ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದ್ದು, ಸೋತ ತಂಡಕ್ಕೆ ಇನ್ನೊಂದು ಅವಕಾಶ ಸಿಗಲಿದೆ.
ನಾಳೆ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ.