
ಶಿವಮೊಗ್ಗ : ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ (ಆ.10) ರಂದು ಹೊನ್ನಾಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಳ್ಳಿಯಲ್ಲಿ ‘ಕೆಸರು ಗದ್ದೆ ಕ್ರೀಡೋತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಇಂತಹ ಸ್ಪರ್ಧೆಯನ್ನು ಶಿವಮೊಗ್ಗದಲ್ಲೂ ನಡೆಸಬೇಕೆಂಬ ಉದ್ದೇಶದಿಂದ ಈ ಕ್ರೀಡೋತ್ಸವವನ್ನು ಹಮ್ಮಿಕೊಂಡಿದ್ದು, ಹಗ್ಗ ಜಗ್ಗಾಟ, ಹ್ಯಾಂಡ್‌ಬಾಲ್, ನಿಧಿಶೋಧ, ಫುಟ್ ಬಾಲ್, ಮಡಿಕೆ ಒಡೆಯುವುದು ಹಾಗೂ ಇನ್ನಿತರ ಸ್ಪರ್ಧೆಗಳಿವೆ. ಪ್ರವೇಶ ಶುಲ್ಕ ರೂ.200/- ಗಳನ್ನು ನಿಗಧಿಪಡಿಸಲಾಗಿದೆ. ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಇದನ್ನೂ ಓದಿ » ವಿಶ್ವ ಪ್ರವಾಸೋದ್ಯಮ ದಿನದ ಪ್ರಯುಕ್ತ ವಿವಿಧ ಸ್ಪರ್ಧೆಗಳ ಆಯೋಜನೆ, ಡಿಸಿ ಕೊಟ್ಟ ಸ್ಪರ್ಧೆಯ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ
ಕಾರ್ಯಕ್ರಮವನ್ನು ಮುಕ್ಕಾಲು ಎಕರೆ ಜಾಗದಲ್ಲಿ ಆಯೋಜನೆ ಮಾಡಲಾಗಿದೆ. ಮಕ್ಕಳು, ಮಹಿಳೆಯರು ಹಾಗೂ ಪುರುಷರು ಈ ಕ್ರೀಡೋತ್ಸವದಲ್ಲಿ ಭಾಗವಹಿಸುತ್ತಿದ್ದು, 200 ರಿಂದೆ 250 ಸ್ಪರ್ಧಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
– ಶ್ರೀನಾಗ್, ಕ್ಲಬ್ ಕಾರ್ಯದರ್ಶಿ
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಿಗ್ಗೆ 9.30 ಕ್ಕೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡ ಶ್ರೀಕಾಂತ್, ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷ ಮೋಹನ್ ರೆಡ್ಡಿ, ಮಾಜಿ ಜಿ.ಪಂ. ಸದಸ್ಯ ಕೆ.ಈ.ಕಾಂತೇಶ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಹೆಚ್.ಪಿ.ಸುದರ್ಶನ್, ನಿರ್ದೇಶಕರಾದ ಗಾ.ರಾ.ಶ್ರೀನಿವಾಸ್, ನವೀನ್ ತಲಾರಿ, ಪರಮೇಶ್ವರ್, ಶ್ರೀಧರ್ ಹೆಗಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ » ಜಿಲ್ಲೆಯ ಸ್ವತಂತ್ರ ಹೋರಾಟಗಾರರಿಗೆ ರಾಜ್ಯಪಾಲರ ಪರವಾಗಿ ಡಿಸಿ ಸನ್ಮಾನ