Job News: ಪಿಯುಸಿ, ಯಾವುದೇ ಪದವಿ ಪಡೆದ ಅಭ್ಯರ್ಥಿಗಳಿಗೆ ನೇರ ಸಂದರ್ಶನ, ಯಾವಾಗ?

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.29 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ » ಜು.29 ರಿಂದ ಸೆ.26 ರವರೆಗೆ ಪರಾಭವ ನಾಮ ಸಂವತ್ಸರದ ‘ಚಾತುರ್ಮಾಸ್ಯ ವ್ರತ’ ಆಯೋಜನೆ

ಈ ನೇರ ಸಂದರ್ಶನದಲ್ಲಿ ಎಸ್.ಎಂ.ಎಫ್.ಈ. ಇಂಡಿಯಾ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವೇಶ ಉಚಿತವಾಗಿದ್ದು ಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ – 577205 ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9380663606, 9108235132 ಗೆ ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ‌ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...