
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ » ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಯಿಂದ ಅರ್ಹರನ್ನು ಕೈಬಿಡುವುದಿಲ್ಲ, ಜನತೆಗೆ ಸಿ.ಎಸ್.ಚಂದ್ರಭೂಪಾಲ್ ಸ್ಪಷ್ಟನೆ
ಈ ಸಂದರ್ಶನದಲ್ಲಿ ರಾಹುಲ್ ಕಾರ‍್ಸ್ ಪ್ರೈ.ಲಿ., (ಹೊಂಡಾಯಿ) ಕಂಪನಿಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಪಿಯುಸಿ, ಐಟಿಐ, ಬಿಇ ಮತ್ತು ಯಾವುದೇ ಪದವಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.
ಇದನ್ನೂ ಓದಿ » ಶಿವಮೊಗ್ಗದ ಗಾಂಧೀ ಬಜಾರ್ ನಲ್ಲಿ ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ