
ಶಿವಮೊಗ್ಗ : ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶಿಸಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಕೆ.ಮಾಯಣ್ಣಗೌಡ ಅವರು 2024ರ ಜೂ.8 ರಂದು ವರ್ಗಾವಣೆಗೊಂಡಿದ್ದರು. ಒಂದು ವರ್ಷದ ಬಳಿಕ ಪುನಃ ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆಗೆ ವರ್ಗಾವಣೆ ಮಾಡಲಾಗಿದೆ.

ಆಯುಕ್ತರಾಗಿದ್ದ ಡಾ. ಕವಿತಾ ಯೋಗಪ್ಪನವರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಡಾ. ಕವಿತಾ ಯೋಗಪ್ಪನವರ್ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಇದನ್ನೂ ಓದಿ – ಆರ್ ಸಿ ಬಿ ವಿಜಯೋತ್ಸವ ವೇಳೆ ಕಾಲ್ತುಳಿತ: ಶಿವಮೊಗ್ಗದಲ್ಲಿ ಬಿ.ವೈ.ವಿಜಯೇಂದ್ರ ರಿಯಾಕ್ಷನ್?