
ಶಿವಮೊಗ್ಗ : ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದ ಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.
ಇದನ್ನೂ ಓದಿ »ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.