
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜು.07 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ » ನೀರಿನ ಕಂದಾಯ ಪಾವತಿಸಲು 7 ದಿನಗಳ ಗಡುವು, ತಪ್ಪಿದ್ದಲ್ಲಿ ನೀರಿನ ಸಂಪರ್ಕ ಕಡಿತ
ಈ ಸಂದರ್ಶನದಲ್ಲಿ ಆದಿತ್ಯ ಬಿರ್ಲಾ ಕ್ಯಾಪಿಟಲ್ ಪ್ರೈ.ಲಿ., ಇಂಡಸ್ ಬ್ಯಾಂಕ್ ಪ್ರೈ.ಲಿ., ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಡಿಗ್ರಿ ಪೂರೈಸಿದ, 18 ರಿಂದ 35 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.
ಇದನ್ನೂ ಓದಿ » ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ