ಶಿವಮೊಗ್ಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿಯವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ » ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಅಡಿಕೆ ಸಹಕಾರಿ ನಿಯೋಗ

ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಗೆ ಲೋಕಾಯುಕ್ತ ಇನ್ ಸ್ಪೆಕ್ಟರ್ ರುದ್ರೇಶ್ ನೇತೃತ್ವ ವಹಿಸಿದ್ದಾರೆ. 10ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕಿರಣ್‌ ಅಂಗಡಿಯವರು ಶಿವಮೊಗ್ಗ ನಗರದ ಆಳ್ಕೊಳ ಸರ್ಕಲ್‌ ಸಮೀಪದ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಎಸಿಎಫ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಒಂದು ವರ್ಷದ ಹಿಂದೆ ಧಾರವಾಡದಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದ ಕಿರಣ್ ಅಂಗಡಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗದ ಜೊತೆಗೆ ಅವರು ಈ ಹಿಂದೆ ಸೇವೆ ಸಲ್ಲಿಸಿದ್ದ ಧಾರವಾಡ ಸೇರಿದಂತೆ ಇತರೆ ಸ್ಥಳಗಳಲ್ಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ. ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರಿದಿದೆ.

ಇದನ್ನೂ ಓದಿ » ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...