
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಆಯೋಜಿಸಲಾಗುವ ‘ಮಹಿಳಾ ದಸರಾ 2026’ ಕಾರ್ಯಕ್ರಮಗಳ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10.00 ಗಂಟೆಗೆ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಇದನ್ನೂ ಓದಿ » ಊರುಗಡೂರಿನಲ್ಲಿ ಗಣೇಶೋತ್ಸವದ ಸಂಭ್ರಮ: ಭಕ್ತಿಭಾವದಿಂದ ಗಣಪತಿ ಪ್ರತಿಷ್ಠಾಪನೆ
ಈ ಸಭೆಯಲ್ಲಿ ವಿವಿಧ ಮಹಿಳಾ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗುತ್ತದೆ.
ಆದ್ದರಿಂದ ನಗರದ ಎಲ್ಲಾ ಮಹಿಳಾ ಸಂಘ ಸಂಸ್ಥೆಗಳು, ಪ್ರತಿನಿಧಿಗಳು ಹಾಗೂ ಸಾರ್ವಜನಿಕ ಮಹಿಳೆಯರು ತಪ್ಪದೇ ಭಾಗವಹಿಸಬೇಕಾಗಿ ಸಮುದಾಯ ವ್ಯವಹಾರಿಕ ಅಧಿಕಾರಿ ಹಾಗೂ ಮಹಿಳಾ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News: ಸೆ.18 ರಂದು ನೇರ ಸಂದರ್ಶನ