
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಓವರ್ ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ » ನಗರದ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ದಿಢೀರ್ ದಾಳಿ, 51 ಪ್ರಕರಣ ದಾಖಲು
ಕಾರ್ಯಾಚರಣೆಯಲ್ಲಿ 36 ವರ್ಷದ ಮಹಮ್ಮದ್ ಗೌಸ್ ಎಂಬ ಆರೋಪಿಯನ್ನು ಬಂಧಿಸಿ, ಸುಮಾರು ರೂ.3,000/ಗಳ ಮೌಲ್ಯದ 113 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಇದನ್ನೂ ಓದಿ » ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿ: ಕೆ.ಜೆ.ಜಾರ್ಜ್