ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚೆನ್ನಿ ಭೇಟಿ, ನೀರು ಸರಬರಾಜು ವ್ಯತ್ಯಯ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ : ಇಂದು ಬೆಳಗ್ಗೆ ಕುಡಿಯುವ ನೀರಿನ ಪಂಪ್ ಹೌಸ್ ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಭೇಟಿ ನೀಡಿ, ಪರಿಶೀಲಿಸಿ ನೀರಿನ ವ್ಯತ್ಯಯ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ » ಏ.04, 05: ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಶಿವಮೊಗ್ಗ ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು. ಅಧಿಕಾರಿಗಳು ಸ್ಥಳದಲ್ಲೇ ಇದ್ದು ಸಮಸ್ಯೆ ಬಗೆಹರಿಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಶಾಸಕರ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಧಿಕಾರಿಗಳು, ಮುಂದಿನ ಎರಡು ದಿನಗಳಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ಪರಿಹರಿಸುವ ಭರವಸೆಯನ್ನು ನೀಡಿದ್ದಾರೆ.

ನಗರದ ಬಹುತೇಕ ಕಡೆಗಳಲ್ಲಿ ಕಳೆದೆರಡು ದಿನಗಳಿಂದ ಕೆಂಪು ಮಿಶ್ರಿತ ಬಣ್ಣದ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇಂದು ಶಿವಮೊಗ್ಗ ನಗರ ಶಾಸಕರು ಕುಡಿಯುವ ನೀರಿನ ಪಂಪ್ ಹೌಸ್‌ಗೆ ಭೇಟಿ ನೀಡಿ, ನೀರಿನ ವ್ಯತ್ಯಯ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಭಾಕರ್.ಪಿ, ಜಲಮಂಡಳಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೆಟ್ಟರ ಸಂತೆಗೆ ಅದ್ದೂರಿ ಚಾಲನೆ, ಜನಾಕರ್ಷಣೆಯ ವೈವಿಧ್ಯಮಯ ಸ್ಟಾಲ್ಸ್, ಮೊದಲನೇ ದಿನವೇ ಬಾರಿ ರೆಸ್ಪಾನ್ಸ್ 

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...