ಮಳೆ ಅವಾಂತರ, ನ್ಯೂ ಮಂಡ್ಲಿಯಲ್ಲಿನ ಮನೆ ಕುಸಿದ ಸ್ಥಳಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ, ಪರಿಶೀಲನೆ

ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಇದನ್ನೂ ಓದಿ » ಪುನರ್ವಸು ಮಳೆ ಅಬ್ಬರ, ಜಿಲ್ಲೆಯ 4 ತಾಲ್ಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಅವರು, ಸಾರ್ವಜನಿಕರಿಗೆ ಆಗಿರುವ ತೊಂದರೆಗಳ ಕುರಿತು ಸ್ಥಳೀಯ ನಿವಾಸಿಗಳಿಂದ ಮುಕ್ತವಾಗಿ ಮಾಹಿತಿ ಪಡೆದರು.

ಮಳೆಯಿಂದ ನೊಂದ ಕುಟುಂಬಕ್ಕೆ ತಕ್ಷಣದ ತುರ್ತು ಪರಿಹಾರ ವಿತರಿಸಲು ಮತ್ತು ಸರ್ಕಾರದ ನಿಯಮಾವಳಿಗಳ ಅನ್ವಯ ಗರಿಷ್ಠ ಪ್ರಮಾಣದ ಪರಿಹಾರ ಧನವನ್ನು ತ್ವರಿತವಾಗಿ ಮಂಜೂರು ಮಾಡಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಭೇಟಿಯ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ್, ಎಸ್ ಸಿ ಮೋರ್ಚಾ ನಗರ ಅಧ್ಯಕ್ಷ ವಿಜಯೇಂದ್ರ, ಕಾರ್ಯದರ್ಶಿಗಳಾದ ರಾಘವೇಂದ್ರ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...