ಊರಗಡೂರು ಗ್ರಾಮದ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ಎಸ್.ಎನ್.ಚನ್ನಬಸಪ್ಪ ಇಂದು ಗುದ್ದಲಿ ಪೂಜೆ

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವ ಮೂಲಕ ಜನರ ದೈನಂದಿನ ಸಂಚಾರಕ್ಕೆ ಎದುರಾಗಿರುವ ತೊಂದರೆಗಳನ್ನು ನಿವಾರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಇದನ್ನೂ ಓದಿ » ಜೂ.12: ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕ್ಷೇತ್ರ ವ್ಯಾಪ್ತಿಯ ಭಾಗಗಳ ಮೂಲಸೌಕರ್ಯ ಸುಧಾರಣೆಯ ಅಂಗವಾಗಿ ಇಂದು ಬೆಳಿಗ್ಗೆ ಶಾಸಕರು ಕ್ಷೇತ್ರ ವ್ಯಾಪ್ತಿಯ ಊರಗಡೂರು ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಧಿಕೃತವಾಗಿ ಚಾಲನೆ ನೀಡಿದರು.

ಊರಗಡೂರು ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಈ ರಸ್ತೆ ಅಭಿವೃದ್ಧಿ ಅತ್ಯಂತ ಅಗತ್ಯವಾಗಿತ್ತು. ಕಾಮಗಾರಿಯನ್ನು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಗುಣಮಟ್ಟದಿಂದ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ನಗರ ಶಾಸಕರು


ಗುದ್ದಲಿ ಕಾರ್ಯಕ್ರಮದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯರು, ಸ್ಥಳೀಯ ಮುಖಂಡರು, ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನೂ ಓದಿ » ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...