
ಶಿವಮೊಗ್ಗ : ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬರದೇ ಇರುವುದರಿಂದ ಭವಿಷ್ಯದಲ್ಲಿ ಶಿವಮೊಗ್ಗ ನಗರದ ಜನತೆಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮತ್ತು ನಗರದ ಜಲಮೂಲಗಳಾದ ಚಾನಲ್ಗಳನ್ನು ಸ್ವಚ್ಛವಾಗಿಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಹೇಳಿದರು.
ಇದನ್ನೂ ಓದಿ » ಸಚಿವ ಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಷಯ:ಮಧು ಬಂಗಾರಪ್ಪ
ಇಂದು ಶಾಸಕರ ಅಧಿಕೃತ ಕಚೇರಿಯಾದ ಕರ್ತವ್ಯ ಭವನದಲ್ಲಿ ಮಹಾನಗರ ಪಾಲಿಕೆ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಜಂಟಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರು, ಮುಖ್ಯ ಇಂಜಿನಿಯರ್ಗಳು, ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ » ನಂಬರ್ ಪ್ಲೇಟ್ ಇಲ್ಲದ, ಡಿಫೆಕ್ಟಿವ್ ವಾಹನಗಳಿಗೆ ದಂಡ, ಇನ್ಮುಂದೆ ನೋ ವಾರ್ನಿಂಗ್, ಡೈರೆಕ್ಟ್ ಎಫ್ಐಆರ್: ಎಸ್ಪಿ