
ಶಿವಮೊಗ್ಗ : ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಚರ್ಚಿಸಿದರು.
![]()
ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ ಸಹಾಯದ ಅಡಿಯಲ್ಲಿ ಪಡುವಾರ್ಲ್-ಸೋಮೇಶ್ವರ-ಕೊಲ್ಲೂರು ಆಧ್ಯಾತ್ಮಿಕ ಪ್ರವಾಸೋದ್ಯಮ ಕ್ಲಸ್ಟರ್ ಅನ್ನು ಸ್ಥಾಪಿಸುವ ಜೊತೆಗೆ ಶಿವಮೊಗ್ಗದ ಇಸ್ಲಾಪುರದಲ್ಲಿ ವಿಶ್ವದ ಅತಿ ಎತ್ತರದ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಪ್ರತಿಮೆಯ ನಿರ್ಮಾಣ ಮತ್ತು ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು.
ಕೇಂದ್ರ ಸಚಿವರು ಶಿವಮೊಗ್ಗದ ಪ್ರವಾಸೋದ್ಯಮ ಯೋಜನೆಗಳಿಗೆ ನಿರಂತರ ಬೆಂಬಲ ನೀಡುವುದಾಗಿ ಮತ್ತು ಈ ವಿಷಯಗಳಿಗೆ ಸಕಾರಾತ್ಮಕ ಪ್ರತಿಕ್ರಿಯ ನೀಡಿದರು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ ⇒ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ, ಮಳೆ ಹಾನಿ ಪ್ರದೇಶಕ್ಕೆ ಶಾಸಕ ಚೆನ್ನಿ ಭೇಟಿ, ಪರಿಶೀಲನೆ