ವಕೀಲರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಸಂಸದರು, ಶಾಸಕರಿಂದ ಚಾಲನೆ

ಶಿವಮೊಗ್ಗ : ಶಿವಮೊಗ್ಗ ವಕೀಲರ ಸಂಘದ 125 ನೇ ಶತಮಾನೋತ್ತರ ರಜತ ಮಹೋತ್ಸವದ ಐತಿಹಾಸಿಕ ಸಂದರ್ಭದ ಅಂಗವಾಗಿ ಇಂದು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ – 2026 ಕ್ಕೆ ಚಾಲನೆ ನೀಡಲಾಯಿತು.

ಈ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ವಕೀಲರ ಸಂಘವು 125 ವರ್ಷಗಳ ಸುದೀರ್ಘ ಮತ್ತು ಅರ್ಥಪೂರ್ಣ ಇತಿಹಾಸವನ್ನು ಹೊಂದಿದ್ದು, ಈ ಸಂಭ್ರಮವನ್ನು ಕ್ರೀಡೆಗಳ ಮೂಲಕ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಕಾನೂನು ವೃತ್ತಿಯ ಒತ್ತಡದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಕಳೆದ 125 ವರ್ಷಗಳಿಂದ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಪಾತ್ರ ಅತ್ಯಂತ ದೊಡ್ಡದು. ಒತ್ತಡದ ಬದುಕಿನಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ವಕೀಲ ಮಿತ್ರರಲ್ಲಿ ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ವೃದ್ಧಿಸಲು ಈ ಕ್ರೀಡಾಕೂಟವು ಒಂದು ಉತ್ತಮ ವೇದಿಕೆಯಾಗಿದೆ.

ಬಿ.ವೈ.ರಾಘವೇಂದ್ರ, ಸಂಸದರು


ಸ್ವಾತಂತ್ರ್ಯ ಪೂರ್ವದಿಂದಲೂ ಈ ಸಂಘವು ಜನಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡಿದೆ. ಅಂತಹ ಮಹಾನ್ ಪರಂಪರೆಯುಳ್ಳ ಸಂಸ್ಥೆ ಇಂದು ಕ್ರೀಡಾಕೂಟದ ಮೂಲಕ ಇಡೀ ರಾಜ್ಯದ ವಕೀಲರನ್ನು ಒಗ್ಗೂಡಿಸಿರುವುದು ಸಂತಸದ ವಿಷಯ.

ಎಸ್.ಎನ್.ಚನ್ನಬಸಪ್ಪ, ಶಾಸಕರು


ಈ ಸಂದರ್ಭದಲ್ಲಿ ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್.ರಾಘವೇಂದ್ರಸ್ವಾಮಿ, ಮುಖ್ಯ ಅತಿಥಿಗಳಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ಜಿ.ವಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಭಯ ಧನಪಾಲ ಚೌಗಲಾ, ವಿಧಾನ ಪರಿಷತ್ ಸದಸ್ಯರಾದ ಧನಂಜಯ್ ಸರ್ಜಿ, ಬಾಲ್ಕೀಸ್ ಬಾನು, ಜವಳಿ ಮೂಲಭೂತ ಸೌಕರ್ಯ ನಿಗಮದ ಅಧ್ಯಕ್ಷ ಚೇತನ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಪ್ರತಿಷ್ಠಿತ ಕಂಪನಿಗಳಿಂದ ನೇರ ಸಂದರ್ಶನ, ಯಾವಾಗ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...