
ಶಿವಮೊಗ್ಗ : ಜಮೀರ್ ಅಹಮದ್ ಖಾನ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ಹಕ್ಕುಗಳ ವೇದಿಕೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ » ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳವರೆಗೆ ಬೃಹತ್ ನೇಮಕಾತಿ ಅಭಿಯಾನ, 2000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ, ಎಲ್ಲಿ?
ಇಂದು ಶಿವಮೊಗ್ಗ ನಗರದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ, ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂಗಿದರು. ಜಮೀರ್ ಅಹಮದ್ ಅವರು ಕ್ರಿಯಾಶೀಲ, ಜನಪರ ಹಾಗೂ ಜಾತ್ಯತೀತ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ಪ್ರಭಾವಿ ನಾಯಕ. ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಜಮೀರ್ ಅಹಮದ್ ಅವರು ಶಾಸಕರಾಗಿ, ಸಚಿವರಾಗಿ ಜನಮನ ಗೆದ್ದಿದ್ದಾರೆ ಎಂದರು.
ಮುಸ್ಲಿಂ ಸಮುದಾಯ ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆ ಸಂದರ್ಭ ಜಮೀರ್ ಅಹಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಈಡೇರಿಲ್ಲ. ಇದು ಸಮುದಾಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತು ಜಮೀರ್ ಅಹಮದ್ ಖಾನ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.
ದಶಕಗಳಿಂದ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದೆ. ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಜಮೀರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂಬ ಬಲವಾದ ಆಸೆ ಇತ್ತು. ಆದರೆ ಹೈಕಮಾಂಡ್ ಈ ನಿರೀಕ್ಷೆಯನ್ನು ಹುಸಿಗೊಳಿಸಿರುವುದು ಸಮುದಾಯದಲ್ಲಿ ಅಸಮಾಧಾನ ಮೂಡಿಸಿದೆ. ರಾಜ್ಯ ಸರ್ಕಾರ ಮತ್ತು ಹೈಕಮಾಂಡ್ ತಕ್ಷಣವೇ ಎಚ್ಚೆತ್ತುಕೊಂಡು ಜಮೀರ್ ಅಹಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಹಾಗೂ ಸಚಿವ ಸಂಪುಟದಲ್ಲಿ ಸಮುದಾಯದ ಅರ್ಹ ಶಾಸಕರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ವೇದಿಕೆ ಕಟು ಎಚ್ಚರಿಕೆ ನೀಡಿದೆ.
ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷ ಮುನಾವರ್ ಪಾಷಾ, ಉಪಾಧ್ಯಕ್ಷ ಮೊಹಮ್ಮದ್ ಸಾದತ್ ಉಲ್ಲಾ, ಕಾರ್ಯದರ್ಶಿ ಸೈಯದ್ ಮುಜಿಬುಲ್ಲಾ ಹಾಗೂ ಸಮುದಾಯದ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.