ಆಧಾರ್ ಕೆಲಸಕ್ಕೆ ಇನ್ನು ಅಲೆದಾಟ ಬೇಡ! ಶಿವಮೊಗ್ಗದಲ್ಲಿ ಹೊಸ ಆಧಾರ್ ಸೇವಾ ಕೇಂದ್ರ ಆರಂಭ, ಎಲ್ಲಿದೆ ಗೊತ್ತೇ?

ಶಿವಮೊಗ್ಗ : ಸಾರ್ವಜನಿಕರಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಹೊಸ ಆಧಾರ್ ಸೇವಾ ಕೇಂದ್ರವನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಶಿವಮೊಗ್ಗ ಎಸಿ ಡಾ.ಮೈತ್ರಿ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗ ಕಾರ್ಮಿಕರ ಇಎಸ್‍ಐ ಸಮಸ್ಯೆಗೆ ಸಚಿವೆ ಶೋಭಾ ಕರಂದ್ಲಾಜೆ ತಕ್ಷಣದ ಅಭಯ: ESI ಶೀಘ್ರ ಪರಿಹಾರದ ಭರವಸೆ

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ಯುಐಡಿಎಐ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ಮಾದರಿಯ ಆಧಾರ್ ಸೇವಾ ಕೇಂದ್ರವನ್ನು (ಎ.ಎಸ್.ಕೆ.) ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮೊದಲನೇ ಮಹಡಿಯಲ್ಲಿ ಸ್ಥಾಪಿಸಲಾಗಿದ್ದು, ಗುರುವಾರ ಇದಕ್ಕೆ ಚಾಲನೆ ನೀಡಿ ಅವರು‌ ಮಾತನಾಡಿದರು.

ಸಾರ್ವಜನಿಕರು ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಅಗತ್ಯ ಸೇವೆಗಳನ್ನು ಈ ಕೇಂದ್ರದಲ್ಲಿ ಪಡೆದುಕೊಳ್ಳಬಹುದು. ಆಧಾರ್ ಸೇವೆಗಳನ್ನು ಜನಸ್ನೇಹಿಯಾಗಿ ಒದಗಿಸುವ ಮೂಲಕ ಸಾರ್ವಜನಿಕರ ಸಮಯ ಉಳಿತಾಯವಾಗಬೇಕು. ಅಧಿಕಾರಿಗಳು ಸೇವೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಯಾವುದೇ ವಿಳಂಬವಿಲ್ಲದೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.

– ಡಾ. ಮೈತ್ರಿ, ಶಿವಮೊಗ್ಗ ಎಸಿ


ಶಿವಮೊಗ್ಗ ನಗರದಲ್ಲಿ ಜನಸಾಂದ್ರತೆ ಹೆಚ್ಚುತ್ತಿರುವುದು, ಶೈಕ್ಷಣಿಕ ಸಂಸ್ಥೆಗಳು ಮತ್ತು ಕೈಗಾರಿಕಾ ಕ್ಲಸ್ಟರ್‌ಗಳ ಬೆಳವಣಿಗೆಯಿಂದಾಗಿ ಆಧಾರ್ ನೋಂದಣಿ ಹಾಗೂ ನವೀಕರಣ ಸೇವೆಗಳಿಗೆ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಈ ಹೊಸ ಕೇಂದ್ರದ ಆರಂಭದಿಂದಾಗಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಮತ್ತು ಸುಲಭವಾಗಿ ಲಭ್ಯವಾಗುವ ಸೇವೆಗಳು ನೇರವಾಗಿ ಸಿಗಲಿದ್ದು, ನಗರದ ಇತರ ಕೇಂದ್ರಗಳ ಮೇಲಿನ ಒತ್ತಡವೂ ಕಡಿಮೆಗೊಳ್ಳಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಯುಐಡಿಎಐ ಆರ್‌.ಒ. ಬೆಂಗಳೂರು ಉಪ ನಿರ್ದೇಶಕಿ ಪ್ರಿಯಾ ಶ್ರೀಕುಮಾರ್, ಪ್ರಾಜೆಕ್ಟ್ ಮ್ಯಾನೇಜರ್ ರಿಕೇಶ್ ಕುಮಾರ್, ಸಹಾಯಕ ವ್ಯವಸ್ಥಾಪಕ ಪ್ರಸಾದ್ ಬಾಬು, ಬಿಎಲ್ಎಸ್ ಇಂಟರ್ನ್ಯಾಷನಲ್ ಕ್ಲಸ್ಟರ್ ಮ್ಯಾನೇಜರ್ ಶ್ಯಾಮ್ ಸುಂದರ್, ಆಧಾರ್ ಜಿಲ್ಲಾ ಸಂಯೋಜಕ ಸತೀಶ್ಚಂದ್ರ, ಹಾಜರಿದ್ದರು.

ಇದನ್ನೂ ಓದಿ » ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ನ.30 ಕೊನೆಯ ದಿನ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...