
ಶಿವಮೊಗ್ಗ : ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಲಾಯಿತು.
ಇದನ್ನೂ ಓದಿ » ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿ: ಕೆ.ಜೆ.ಜಾರ್ಜ್
ಕಾರ್ಯಾಚರಣೆ ವೇಳೆ ನಿಯಮ ಬಾಹಿರವಾಗಿ ಧೂಮಪಾನ ಮಾಡುತ್ತಿದ್ದ ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ ಒಟ್ಟು 51 ಪ್ರಕರಣಗಳನ್ನು ದಾಖಲಿಸಿಕೊಂಡು, ರೂ.4,500/ಗಳ ದಂಡದ ಮೊತ್ತವನ್ನು ವಸೂಲಿ ಮಾಡಲಾಗಿದೆ. ಇದೇ ವೇಳೆ ನಿಲ್ದಾಣದ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳಲ್ಲಿದ್ದ ಕಾನೂನು ಬಾಹಿರ ತಂಬಾಕು ಜಾಹೀರಾತು ಫಲಕಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.
ದಾಳಿ ಸಂದರ್ಭ ತಂಬಾಕು ಮಾರಾಟಗಾರರು ಹಾಗೂ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ಗಂಭೀರ ದುಷ್ಪರಿಣಾಮಗಳು ಮತ್ತು ಕೋಟ್ಪಾ ಕಾಯ್ದೆಯ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ರವಿರಾಜ್, ಪ್ರವೀಣ್ ಹಾಗೂ ಮಹಾನಗರಪಾಲಿಕೆ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಇದ್ದರು.
ಇದನ್ನೂ ಓದಿ » ಎಸ್‌ಐಆರ್ ಕುರಿತು ಆತಂಕ ಬೇಡ, ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು: ಕೆ.ಜೆ.ಜಾರ್ಜ್