
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ನಗರದ ನೆಹರು ಕ್ರೀಡಾಂಗಣದಲ್ಲಿ ನೆರವೇರಿದ ಅದ್ಧೂರಿ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನವರು ರಾಷ್ಟ್ರಧ್ವಜ ಹಾರಿಸಿ, ಧ್ವಜವಂದನೆ ಸಲ್ಲಿಸಿದರು.

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಸಶಸ್ತ್ರ ಪಡೆಗಳು ಹಾಗೂ ವಿದ್ಯಾರ್ಥಿಗಳಿಂದ ಗೌರವ ಸಲ್ಲಿಸಲಾಯಿತು.
ಜಿಲ್ಲೆಯ ಜನತೆಗೆ ಸಚಿವ ಎಸ್.ಮಧು ಬಂಗಾರಪ್ಪ ನವರು ಸ್ವಾತಂತ್ರ್ಯ ದಿನೋತ್ಸವದ ಶುಭಾಶಯ ಕೋರಿ ಸಂದೇಶ ತಿಳಿಸಿದರು. ತ್ಯಾಗ-ಬಲಿದಾನ ನೀಡಿದ ದೇಶದ ಮಹಾನ್ ನಾಯಕರನ್ನು ಸ್ಮರಿಸಿದರು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನೆಹರು ಕ್ರೀಡಾಂಗಣ ಭರ್ತಿಯಾಗಿತ್ತು.
ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು ಆಗಮಿಸಿದ್ದ ಜನರ ಗಮನ ಸೆಳೆದವು. ಎಲ್ಲೆಲ್ಲೂ ದೇಶಭಕ್ತಿ ರಾರಾಜಿಸುತ್ತಿತ್ತು.