
ಶಿವಮೊಗ್ಗ : ಇಂದು ನಗರದ ದೊಡ್ಡಪೇಟೆ ಟ್ರಾಫಿಕ್ ಪೊಲೀಸ್ ಠಾಣೆಯ ಆವರಣದಲ್ಲಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವ ಉತ್ತಮ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯು ಗಿಡ ನೆಡುವಂತಹ ಉತ್ತಮ ಕಾರ್ಯಕ್ರಮವನ್ನು ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಯಶಸ್ವಿಯಾಗಿ ನಡೆಸಿದೆ.

ಈ ಕಾರ್ಯಕ್ರಮದಲ್ಲಿ ಎಸ್.ಐ. ತಿರುಮಲೇಶ್, ಠಾಣೆಯ ಸಿಬ್ಬಂದಿ ವರ್ಗದವರು ಹಾಗೂ ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಜಿಲ್ಲಾಧ್ಯಕ್ಷರಾದ ರಮೇಶ್, ಶಿವಮೊಗ್ಗ ನಗರ ಅಧ್ಯಕ್ಷರಾದ ವಿಜಯ್.ಎನ್ ಹಾಗೂ ಪದಾಧಿಕಾರಿಗಳಾದ ಕುಮಾರ್, ರಾಜೀವ್, ಬಾಬಾಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.