
ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನಲೆ ಅಕ್ರಮ ಚಟುವಟಿಕೆ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಇದನ್ನೂ ಓದಿ » ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ-ಪರಿಶೀಲನೆ, ತ್ವರಿತ ಪರಿಹಾರ ಕ್ರಮಕ್ಕೆ ಸೂಚನೆ
ಎಸ್ಪಿ ನಿಖಿಲ್ ಅವರ ಖಡಕ್ ಸೂಚನೆ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸರು ಡ್ರೋಣ್ ಹಾರಿಸಿ 19 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭದ್ರಾವತಿ ತಾಲೂಕಿನ ಕೂಡ್ಲಿಗೆರೆಯ ಅರಣ್ಯ ಪ್ರದೇಶಗಳಲ್ಲಿ ಡ್ರೋಣ್ ಹಾರಿವೆ. ಈಗ ಭದ್ರಾವತಿಯ ಕೂಡ್ಲಿಗೆರೆಯಲ್ಲಿ ಡ್ರೋಣ್ ಹಾರಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ 19 ಜನರ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಮಲ್ಲಾಪುರ, ಕಲ್ಲಿಹಾಳ್ ತಟ್ಟೆಹಳ್ಳಿ ಭಾಗದಲ್ಲಿ ಹಗಲು ರಾತ್ರಿ ತೂರಬಿಲ್ಲೆ ಆಟ ನಡೆಯುತ್ತದೆ ಎಂಬುದರ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಡ್ರೋಣ್ ಹಾರಿಸಿ ಪೊಲೀಸರು ಕ್ರಮಕೈಗೊಂಡಿದ್ದಾರೆ.