ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸರು, ಸಾರ್ವಜನಿಕ ವಲಯದಲ್ಲಿ ಪ್ರಶಂಸೆ!

ಶಿವಮೊಗ್ಗ : ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ರೈಲು ನಿಲ್ದಾಣದ ಪ್ಲಾಟ್‌ ಫಾರ್ಮ್ ಸಂಖ್ಯೆ 1 ರಲ್ಲಿ ಈ ಘಟನೆ ಸಂಭವಿಸಿದೆ.

ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕನೊಬ್ಬ ಸಾಹಸ ಮಾಡಿದ್ದಾನೆ. ಈ ಸಂದರ್ಭದಲ್ಲಿ ರೈಲು ವೇಗವನ್ನು ಪಡೆದುಕೊಂಡಿದ್ದರಿಂದ ಆತನ ಸಮತೋಲನ ತಪ್ಪಿ ಕೆಳಗೆ ಬೀಳುವಂತಾಗಿದ್ದಾನೆ. ಅಪಾಯದಲ್ಲಿದ್ದ ಪ್ರಯಾಣಿಕನನ್ನು ತಕ್ಷಣವೇ ಗಮನಿಸಿದ ಆರ್‌ಪಿಎಫ್ ಇನ್ಸ್ ಪೆಕ್ಟರ್ ಬಿ.ಕೆ.ಪ್ರಕಾಶ್ ಅವರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಯಾಣಿಕ ಇನ್ನೇನು ಕೆಳಗೆ ಬಿದ್ದು ಪ್ರಾಣ ಕಳೆದುಕೊಳ್ಳಬೇಕು ಎನ್ನುವಷ್ಟರಲ್ಲಿ ಜಾಣ್ಮೆಯಿಂದ ಆತನನ್ನು ಸುರಕ್ಷಿತವಾಗಿ ಬೋಗಿಯ ಒಳಗೆ ತಳ್ಳಿದ್ದಾರೆ.

ದೂರದಿಂದಲೇ ಓಡಿ ಬಂದು ಪ್ರಯಾಣಿಕನ ಜೀವ ರಕ್ಷಣೆ ಮಾಡಿದ ಆರ್‌ಪಿಎಫ್ ಇನ್ಸ್ಪೆಕ್ಟರ್ ಬಿ.ಕೆ.ಪ್ರಕಾಶ್ ಅವರ ಈ ಕಾರ್ಯವು ರೈಲ್ವೆ ನಿಲ್ದಾಣದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜನಸಾಮಾನ್ಯರ ರಕ್ಷಣೆಗೆ ನಿಂತ ಇನ್ಸ್ಪೆಕ್ಟರ್ ಕಾರ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜಿಲ್ಲೆಯಲ್ಲಿ ಉದ್ಯೋಗ ಮೇಳ, ನೇರ ಸಂದರ್ಶನದ ಮೂಲಕ ಆಯ್ಕೆ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...