ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಶಿವಮೊಗ್ಗ : ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಈ ವೇಳೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ಅವರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ » ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ಸಕ್ರಿಯವಾಗಿ ಪಾಲ್ಗೊಳ್ಳಲು ನ್ಯಾ. ಸಂತೋಷ್ ಕರೆ

ಕೊಲೆ ಆರೋಪಿ ಕಿಶೋರ್ (28) ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ದಾಳಿಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಗಣೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಿಳಘಟ್ಟದ ನಿವಾಸಿಯಾಗಿದ್ದ ಅಜ್ಜಿ ಸುಶೀಲಮ್ಮ (65) ಅವರ ತಲೆ ಮೇಲೆ ಬುಧವಾರ ಸೈಜುಗಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆಗೈದಿದ್ದ ಕಿಶೋರ್ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಲೇಔಟ್‌ನಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ವೈ. ಅವರ ನೇತೃತ್ವದ ತಂಡ ಮುಂಜಾನೆ ದಾಳಿ ನಡೆಸಿತ್ತು.

ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಲಾಂಗ್‌ನಿಂದ ಪೊಲೀಸ್ ಸಿಬ್ಬಂದಿ ಗಣೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಸ್ಥಿತಿ ಕೈಮೀರಿದ ಹಿನ್ನಲೆ ಇನ್ಸ್‌ಪೆಕ್ಟರ್ ಸತ್ಯನಾರಾಯಣ್ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಶರಣಾಗದಿದ್ದಾಗ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ. ನಿಖಿಲ್‌ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ » 5 ರಿಂದ 8 ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...