
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.12 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಈ ಕೆಳಗಿನ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿನ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ವಿನಾಯಕನಗರ, ಹನುಮಂತನಗರ, ರವೀಂದ್ರನಗರ, ರಾಜೇಂದ್ರನಗರ, ಸವಳಂಗ ರಸ್ತೆ, ಉಷಾ ನರ್ಸಿಂಗ್ ಹೋಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್ -20 ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.12 ರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶಿವಪುರ ತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ: ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಚಾಲನೆ