
ಶಿವಮೊಗ್ಗ : 220 ಕೆವಿ ಎಂ.ಆರ್.ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬಸ್ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ತಾವರೆಚಟ್ನಹಳ್ಳಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರಮುಖ ಪ್ರದೇಶಗಳಲ್ಲಿ ನಾಳೆ (ಮೇ 20 ರಂದು) ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಶಿವಬಸವ ನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪು ನಗರ, ಸೂಡಾ ಲೇಔಟ್, ತ್ರಿಮೂರ್ತಿ ನಗರ, ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆನ್ಷನ್ ಹಾಲ್, ಎಲ್ ಬಿ ಎಸ್ ನಗರ, ಅಶ್ವತ್ಥ್ ನಗರ, ಕೀರ್ತಿ ನಗರ, ದೇವಂಗಿ 01 ನೇ ಹಂತ, ಬಸವೇಶ್ವರ ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಕೃಷಿ ನಗರ 01 ನೇ ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‌ಮೆಂಟ್, ಶಾಂತಿನಗರ ರಾಗಿಗುಡ್ಡ, ಪಾಪ್ಯುಲರ್ ರೈಸ್ ಮಿಲ್, ಪೇಸ್ ಕಾಲೇಜ್, ತರಳಬಾಳು ಬಡಾವಣೆ, ಈಶ್ವರ್ ರೈಸ್ ಮಿಲ್, ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ, ಅರಣ್ಯಾಧಿಕಾರಿಗಳ ದಾಳಿ