
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ -2ರ ಮಂಡ್ಲಿ ವಿ.ವಿ. ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 17 ಮತ್ತು 18 ರಂದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಜೂ.17 ರಂದು ಬೆಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿಲಿದೆ.
ಜೂ.18 ರಂದು ಬೆಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ ⇒ ಅಭಿವೃದ್ಧಿ ಪರ್ವದತ್ತ ದಾಪುಗಾಲು: ಮೋದಿಯವರ ಕುರಿತು ಬಿ.ವೈ.ರಾಘವೇಂದ್ರ ಹೇಳಿಕೆ