
ಶಿವಮೊಗ್ಗ : ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.18 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ ಕೇರಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜೂ.22 ರಂದು ಶಿವಮೊಗ್ಗ ಎಂಆರ್‌ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18 ಹಾಗೂ ಎಂಸಿಎಫ್-20 ರ ಮಾರ್ಗದಲ್ಲಿ ಜೂ.22 ರ ಬೆಳಿಗ್ಗೆ 9.30 ರಿಂದ ಸಂಜೆ 4.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿ ಗ್ರಾಮ, ಹೊನ್ನವಿಲೆ, ಮೆ. ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸಬೇಕೆಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.