ನಾಳೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜು.05 ರಂದು ಬೆಳಗ್ಗೆ 09.00 ರಿಂದ ಸಂಜೆ 4.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ನೇರ ಸಂದರ್ಶನ: ಬ್ಯಾಂಕ್ ಉದ್ಯೋಗದಲ್ಲಿ ಆಸಕ್ತಿ ಇದ್ದರೆ, ಈ ಸುದ್ದಿ ನಿಮಗಾಗಿ!

ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಚಾಲುಕ್ಯನಗರ, ಮಂಜಪ್ಪ ಬಸಪ್ಪ ಲೇಔಟ್, ಗದ್ದೆಮನೆ ಲೇಔಟ್, ಭರತ್ ಎಂಟರ್‌ಪ್ರೈಸಸ್, ಆಶ್ರಯ ಬಡಾವಣೆ, ಆನಂದಗಿರಿ ಬಡಾವಣೆ, ಮಲ್ಲಿಕಾರ್ಜುನ ಬಡಾವಣೆ, ವಿನಾಯಕ ಸರ್ಕಲ್, ಜಿ.ಎಸ್. ಕಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, 100 ಅಡಿ ರಸ್ತೆ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಇಲಿಯಾಜ್ ನಗರ ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕೆ.ಇ.ಬಿ. ವೃತ್ತದ ಸುತ್ತಮುತ್ತಾ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ:

ನಗರದ ಕೆ.ಇ.ಬಿ ವೃತ್ತದ ಹತ್ತಿರ ‘ಸ್ಪಿನ್ ಪೋಲ್ ಶಿಫ್ಟಿಂಗ್’ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರದ ಕೆ.ಇ.ಬಿ ಸರ್ಕಲ್, ಬಾಪೂಜಿ ನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಇದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗ ನಗರ ಉಪ ವಿಭಾಗ-1ರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಾಚೇನಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ:

ಶಿವಮೊಗ್ಗ ಮಾಚೇಹಳ್ಳಿ 110/11 ಕೆ.ವಿ. ವಿ.ವಿ.ಕೇಂದ್ರದ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜು.05 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಮೆ. ಈ.ರಾಮಮೂರ್ತಿ ಮಿನರಲ್ಸ್ ಪ್ರೈ.ಲಿ., ಕೆ.ಎಂ.ಎಫ್.ಡೈರಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಮಳೆ ಕೊರತೆ: ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ, ರೈತರಿಗೆ ಸೂಚನೆ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...