ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ನಿರುಪಯುಕ್ತ ವಾಹನಗಳ ತೆರವು

ಶಿವಮೊಗ್ಗ : ನಗರದ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿರುಪಯುಕ್ತವಾಗಿ ನಿಲ್ಲಿಸಲಾಗಿದ್ದ ವಾಹನಗಳ ವಿರುದ್ಧ ಶಿವಮೊಗ್ಗ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನೋಟಿಸ್ ಅಂಟಿಸಿ ಎಚ್ಚರಿಕೆ ನೀಡಿದ್ದ ವಾಹನಗಳನ್ನು ಇದೀಗ ಪೊಲೀಸರು ವಶಕ್ಕೆ ಪಡೆದು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ.

ರಸ್ತೆ, ಪಾದಚಾರಿ ಮಾರ್ಗ ಹಾಗೂ ಸರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಲಾಗಿದ್ದ ಒಟ್ಟು 84 ವಾಹನಗಳು ಪತ್ತೆಯಾಗಿದ್ದು, ಇವುಗಳಿಂದ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದ ಕಾರಣ, ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ರವರ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ವಾಹನಗಳ ಮಾಲೀಕರಿಗೆ ವಾಹನಗಳನ್ನು ತೆರವುಗೊಳಿಸುವಂತೆ ಸೂಚಿಸಿ, ವಾಹನಗಳ ಮೇಲೆ ನೋಟಿಸ್ ಅಂಟಿಸಲಾಗಿತ್ತು.

ನೋಟಿಸ್ ನೀಡಿದ ನಂತರ 84 ವಾಹನಗಳಲ್ಲಿ 68 ವಾಹನಗಳ ಮಾಲೀಕರು ಸ್ವಯಂಪ್ರೇರಿತವಾಗಿ ತಮ್ಮ ವಾಹನಗಳನ್ನು ತೆರವುಗೊಳಿಸಿರುತ್ತಾರೆ. ವಾಹನ ಮಾಲೀಕರಿಗೆ ಅವಕಾಶ ನೀಡಿದ ನಂತರವೂ ತೆರವುಗೊಳಿಸದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಬಾಕಿ ಉಳಿದ 16 ವಾಹನಗಳನ್ನು ಸೋಮವಾರದಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ರವರ ನೇತೃತ್ವದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಮೋಟಾರು ವಾಹನ ಕಾಯ್ದೆ ಪ್ರಕಾರ ಈ ವಾಹನಗಳನ್ನು ಪರಿತ್ಯಕ್ತ ಅನುಪಯುಕ್ತ (Abandoned Vehicle) ಎಂದು ಪರಿಗಣಿಸಿ ಜಾರಿಯಲ್ಲಿರುವ ನಿಯಮಾನುಸಾರ ಟೋಯಿಂಗ್ ವಾಹನದ ಮೂಲಕ ತೆರವುಗೊಳಿಸುವ ಕಾರ್ಯಚರಣೆ ಕೈಗೊಳ್ಳಲಾಗಿದೆ. ಈ ಕಾರ್ಯಚರಣೆಯ ಅಂಗವಾಗಿ ಸಾಂಕೇತಿಕವಾಗಿ ಅಶೋಕ ನಗರ ಪ್ರದೇಶದಲ್ಲಿನ 06 ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಯಿತು.

ಸಾರ್ವಜನಿಕರು ರಸ್ತೆ, ಪಾದಚಾರಿ ಮಾರ್ಗ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲುಗಡೆ ಮಾಡದೇ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನಂತಿಸಲಾಗುತ್ತದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟುಮಾಡುವ ವಾಹನಗಳ ವಿರುದ್ಧ ಮುಂದೆಯೂ ಇದೇ ರೀತಿಯ ಕ್ರಮವನ್ನು ನಿರಂತರವಾಗಿ ಕೈಗೊಳ್ಳಲಾಗುವುದು ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...