ವಸತಿ ಶಾಲೆಗಳ ಮಧ್ಯಂತರ ದಾಖಲಾತಿ: ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ಹಾಗೂ ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ 2025-26 ನೇ ಶೈಕ್ಷಣಿಕ ಸಾಲಿನಲ್ಲಿ 7 ಮತ್ತು 8 ನೇ ತರಗತಿಗಳಿಗೆ ಮಧ್ಯಂತರ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಯನ್ನು ತಾಲ್ಲೂಕುವಾರು ಕೇಂದ್ರಗಳಲ್ಲಿ ಪಡೆಯಬಹುದು.

ಜೂ.09 ರಿಂದ ಅರ್ಜಿ ವಿತರಣೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜೂ.16 ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ತಾಲ್ಲೂಕುವಾರು ಕೇಂದ್ರಗಳಲ್ಲಿ ಸಲ್ಲಿಸಬೇಕು.

ಶಿವಮೊಗ್ಗ ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಕಸಬಾ, ಭದ್ರಾವತಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವರನರಸೀಪುರ, ಸಾಗರ ತಾಲ್ಲೂಕಿನ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಎಡೆಹಳ್ಳಿ, ತೀರ್ಥಹಳ್ಳಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆನಂದಗಿರಿ, ಹೊಸನಗರ ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಹುಂಚ, ಸೊರಬ ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹುಣಸವಳ್ಳಿ, ಶಿಕಾರಿಪುರ ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಅಂಬಾರಗೊಪ್ಪ ಇವುಗಳು ಅರ್ಜಿ ಸ್ವೀಕೃತಿ ಕೇಂದ್ರವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಗಳನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...