ಶಿವಮೊಗ್ಗದ ಗಾಂಧೀ ಬಜಾರ್ ನಲ್ಲಿ ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

ಶಿವಮೊಗ್ಗ : ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ » ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

ನಗರದ ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಯಾದ ನರಸಿಂಹನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮನೆಯೊಂದರ ಓಣಿ ಒಳಗೆ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ನರಸಿಂಹನ ತಲೆ ಹಾಗೂ ಕೈ ಭಾಗಕ್ಕೆ ದಾಳಿ ಮಾಡಲಾಗಿದೆ. ದಾಳಿಯ ಭೀಕರತೆಗೆ ನರಸಿಂಹನ ಕೈಗಳು ತುಂಡಾಗಿದ್ದು, ಮುಖ ಗುರುತು ಸಿಗದಂತಹ ಸ್ಥಿತಿಯಲ್ಲಿ ಮನಸೋಯಿಚ್ಛೆ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ » ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...