ಸ್ಕೌಟ್ಸ್ ಅಂಡ್ ಗೈಡ್ಸ್‌ಗೆ 77ರ ಸಂಭ್ರಮ: ಧ್ವಜ ದಿನದ ಚೀಟಿಗೆ ಎಡಿಸಿ ಅಭಿಷೇಕ್ ವಿ. ಚಾಲನೆ

ಶಿವಮೊಗ್ಗ : ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ 77ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಧ್ವಜ ದಿನದ ಚೀಟಿ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ » ಎನ್‌ಡಿಎ ಪರೀಕ್ಷೆಯಲ್ಲಿ ಭದ್ರಾವತಿಯ ಶ್ರೇಯಾ ದೇಶಕ್ಕೆ ಪ್ರಥಮ!

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಧ್ವಜ ದಿನದ ಚೀಟಿಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಗುಣ, ದೇಶಪ್ರೇಮ ಹಾಗೂ ಸಮಾಜಸೇವೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಂಸ್ಥೆಯ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.

ಧ್ವಜ ದಿನದ ಚೀಟಿ ಬಿಡುಗಡೆ ಮಾಡುವ ಮೂಲಕ ಸಂಸ್ಥೆಯ ಸೇವಾ ಚಟುವಟಿಕೆಗಳು, ಧ್ಯೇಯೋದ್ದೇಶಗಳು ಹಾಗೂ ಸಮಾಜಮುಖಿ ಕಾರ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ.

ಕಾರ್ಯಕ್ರಮದಲ್ಲಿ ಪ್ರಧಾನ ಆಯುಕ್ತರಾದ ಶಕುಂತಲಾ ಚಂದ್ರಶೇಖರ್, ಆಯುಕ್ತರಾದ ಎಸ್.ಜಿ. ಆನಂದ್, ಕೆ. ರವಿ, ರಾಜೇಶ್ ಅವಲಕ್ಕಿ, ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ. ವಿಜಯ್ ಕುಮಾರ್, ಮಲ್ಲಿಕಾರ್ಜುನ್ ಕಾನೂರ್, ಸಿ.ಎನ್. ಸುಜಯ್, ಸೋಮಣ್ಣ, ಪ್ರಭಾವತಿ ಹಾಗೂ ಕಾರ್ಯದರ್ಶಿ ಕೆ.ವಿ. ಚಂದ್ರಶೇಖರಯ್ಯ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಕಬ್ಸ್ ಅಂಡ್ ಬುಲ್ ಬುಲ್ಸ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ » ಮೀಟರ್ ಇಲ್ಲದೆ ಆಟೋ ಓಡಿಸಿದರೆ ಕ್ರಮ? RTO ನಿಂದ ಖಡಕ್ ಸೂಚನೆ!

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...