ರೇಷ್ಮೆ ಇಲಾಖೆ: ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ರೇಷ್ಮೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರಿಗೆ ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿಯುಳ್ಳ ರೈತರಿಗೆ ವಿವಿಧ ಸಹಾಯಧನ ಪಡೆಯಲು ಅರ್ಹ ರೈತರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ » “ಗೃಹಲಕ್ಷ್ಮೀ” ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ, ವದಂತಿಗಳಿಗೆ ಕಿವಿಗೊಡದಂತೆ ಮನವಿ

ಈ ಯೋಜನೆಯಡಿ ಹೊಸದಾಗಿ ಹಿಪ್ಪುನೇರಳೆ ನಾಟಿ ಮಾಡಲು ಬಯಸುವ ರೈತರಿಗೆ ಆರ್ಥಿಕ ನೆರವು ಮತ್ತು ಸ್ವಂತ ನರ್ಸರಿ ಸ್ಥಾಪಿಸಲು ಇಚ್ಛಿಸುವ ಆಸಕ್ತರಿಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 14‌ ಕೊನೆಯ ದಿನವಾಗಿದ್ದು, ಆಸಕ್ತ ರೈತರು ನಿಗದಿತ ಕೊನೆಯ ದಿನಾಂಕದೊಳಗಾಗಿ ಅಧಿಕೃತ ವೆಬ್‌ಸೈಟ್ www.shivamogga.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ.

ಯೋಜನೆಯ ನಿಯಮಗಳು, ಅರ್ಹತೆ ಹಾಗೂ ಅಗತ್ಯ ದಾಖಲಾತಿಗಳ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರೇಷ್ಮೆ ಉಪನಿರ್ದೇಶಕರ ಕಚೇರಿ, 100 ಅಡಿರಸ್ತೆ, ರಾಜೇಂದ್ರ ನಗರ, ಶಿವಮೊಗ್ಗ ದೂ.ಸಂ.:08182-184637 ನ್ನು ಸಂಪರ್ಕಿಸಬಹುದೆಂದು ರೇಷ್ಮೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿಕಾರಿಪುರ: ಬಸ್ ವ್ಯವಸ್ಥೆ ಕಲ್ಪಿಸುವಂತೆ ಡಿಪೋ ವ್ಯವಸ್ಥಾಪಕರಿಗೆ ಮನವಿ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...