
ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲಾಗುತ್ತಿದೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಇದನ್ನೂ ಓದಿ » ಎಸ್ಐಆರ್ ಕುರಿತು ಆತಂಕ ಬೇಡ, ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು: ಕೆ.ಜೆ.ಜಾರ್ಜ್
ಶರಾವತಿ ಜಲಾಶಯ ನಿರ್ಮಾಣದ ಸಂದರ್ಭದಲ್ಲೂ ಸಾವಿರಾರು ಎಕರೆ ಭೂಮಿ ಮುಳುಗಡೆಯಾಗಿದ್ದರೂ ಸೀಮಿತ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ನಡೆಯುತ್ತಿದೆ. ಆದರೆ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಕಡಿಮೆ ಭೂಮಿ ಬಳಕೆಯಲ್ಲೇ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ.
– ಕೆ.ಜೆ.ಜಾರ್ಜ್, ಇಂಧನ ಸಚಿವರು
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯೋಜನೆಗೆ ಸುಮಾರು 125 ಎಕರೆ ಭೂಮಿ ಅಗತ್ಯವಿದ್ದು, ಪೈಪ್ಲೈನ್ ಅಳವಡಿಕೆ ಬಳಿಕ ಆ ಪ್ರದೇಶದಲ್ಲಿ ಪುನಃ ಹಸಿರು ವಾತಾವರಣ ನಿರ್ಮಿಸಲಾಗುತ್ತದೆ. ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುವುದಿಲ್ಲ ಹಾಗೂ ಅಗತ್ಯವಿರುವ ಎಲ್ಲ ಅನುಮತಿಗಳನ್ನು ಪಡೆದ ನಂತರವೇ ಜಾರಿಗೆ ತರಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಮಲೆನಾಡಿನಲ್ಲಿ ಈ ಬಾರಿ ಮುಂಗಾರು ಕೊರತೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇನ್ನೂ ಮಳೆಗಾಲದ ಅವಧಿ ಉಳಿದಿದ್ದು ಮಳೆಯ ಬಗ್ಗೆ ಆಶಾವಾದವಿದೆ ಎಂದರು. ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಇದನ್ನೂ ಓದಿ » ಕಿರಣ ಕೇಂದ್ರ ವಿದ್ಯಾಲಯ ಶಾಲೆಯಲ್ಲಿ ವಿವಿಧ ಶೈಕ್ಷಣಿಕ ಕ್ಲಬ್ ಗಳ ಕಾರ್ಯಕ್ರಮಕ್ಕೆ ಚಾಲನೆ