ಶಿಕಾರಿಪುರ-ಆನಂದಪುರ: ನೂತನ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗೆ ಚಾಲನೆ

Amrutha KHome5 months ago

ಆನಂದಪುರ : ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಶಿಕಾರಿಪುರದಿಂದ ಆನಂದಪುರ ಮಾರ್ಗವಾಗಿ ಸಂಚರಿಸುವ ನೂತನ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಚಾಲನೆ ನೀಡಿದ್ದಾರೆ.

ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News: ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಸಮೀಪದ ಬೈರಾಪುರದಲ್ಲಿ ಹೊಸ ಬಸ್‌ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಿಂದಾಗಿ ಮಹಿಳೆಯರಿಗೆ ರಾಜ್ಯದಾದ್ಯಂತ ಸಂಚರಿಸಲು ಬಹಳಷ್ಟು ಸಹಕಾರಿಯಾಗಿದೆ. ಅದರಲ್ಲೂ ವಿಶೇಷವಾಗಿ ಧರ್ಮಸ್ಥಳದಂತಹ ಧಾರ್ಮಿಕ ಕೇಂದ್ರಗಳಿಗೆ ಪ್ರಯಾಣಿಸಲು ಸುಲಭವಾಗಿದೆ. ಸಾಗರ ಬಸ್ ಡಿಪೋದ ನವೀಕರಣಕ್ಕಾಗಿ 4 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಕಳೆದ 2 ವರ್ಷಗಳಿಂದ ಈ ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆ ಆರಂಭಿಸಬೇಕೆಂದು ಸಾರ್ವಜನಿಕರು ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೊಸ ಬಸ್ ಸೇವೆಯನ್ನು ಒದಗಿಸಲಾಗಿದೆ.

| ಗೋಪಾಲಕೃಷ್ಣ ಬೇಳೂರು, ಶಾಸಕರು


ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 4,000 ಹೊಸ ಬಸ್‌ಗಳನ್ನು ಖರೀದಿಸಿದ್ದು, ಅವುಗಳಲ್ಲಿ 9 ಬಸ್‌ಗಳನ್ನು ಸಾಗರ ಘಟಕಕ್ಕೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಸಾಗರಕ್ಕೆ ಇನ್ನೂ 10 ಬಸ್‌ಗಳನ್ನು ನೀಡುವ ಭರವಸೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೀಡಿದ್ದಾರೆ ಎಂದು ಬೇಳೂರು ತಿಳಿಸಿದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...